Vidyasiri Scholarship 2025: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ.! ಈಗಲೇ ಅರ್ಜಿ ಸಲ್ಲಿಸಿ.!

Vidyasiri Scholarship: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ.! ಈಗಲೇ ಅರ್ಜಿ ಸಲ್ಲಿಸಿ.!

ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ (Vidyasiri Scholarship) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿರುತ್ತದೆ. ಆಸಕ್ತಿ ಮತ್ತು ಅರ್ಹತೆ ಇರುವಂತಹ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಕಡೆಯಿಂದ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.  ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು? ಮತ್ತು ಸಂಪೂರ್ಣವಾದ ವಿವರವನ್ನು ನೀವು ಈ ಕೆಳಗಡೆ ಕಾಣಬಹುದು.

ಸಂಕ್ರಾಂತಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ 2000 ಹಣ ಜಮಾ.! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.!

ಇದೇ ತರಹದ ಹೆಚ್ಚಿನ ಸುದ್ದಿಗಳು ಮತ್ತು ಕರ್ನಾಟಕ ರಾಜ್ಯದಲ್ಲಿ ನಡೆಯುವಂತಹ ಸುದ್ದಿಗಳನ್ನು ಮತ್ತು ಕರ್ನಾಟಕ ರಾಜ್ಯ ಸರ್ಕಾರದ ಹಾಗೂ ಕೇಂದ್ರ ಸರ್ಕಾರದ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ಯೋಜನೆಗಳ ಮಾಹಿತಿಯನ್ನು ದಿನನಿತ್ಯವೂ ಕೂಡ ಪಡೆಯಬೇಕೆಂದು ಬಯಸಿದಲ್ಲಿ ನೀವು ನಮ್ಮ ಜಾಲತಾಣದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ. 

ವಿದ್ಯಾಸಿರಿ ವಿದ್ಯಾರ್ಥಿ ವೇತನ (Vidyasiri Scholarship)

ರಾಜ್ಯದಲ್ಲಿ ಹಿಂದುಳಿದಿರುವ ಹಾಗೂ ಬಡ ವಿದ್ಯಾರ್ಥಿಗಳಿಗೆ ಉನ್ನತವಾದ ಶಿಕ್ಷಣವನ್ನು ಪಡೆಯಲು ಆರ್ಥಿಕ ನೆರವನ್ನು ರಾಜ್ಯ ಸರ್ಕಾರದ ವತಿಯಿಂದ ನೀಡುವ ಯೋಜನೆಯೇ ವಿದ್ಯಾಸಿರಿ ವಿದ್ಯಾರ್ಥಿ ವೇತನ. ರಾಜ್ಯದಲ್ಲಿ ಹಿಂದುಳಿದಿರುವಂತಹ ಹಾಗೂ ಪ್ರವರ್ಗ ಒಂದರ ವಿದ್ಯಾರ್ಥಿಗಳಿಗೆ ಮತ್ತು ಅಲೆಮಾರಿ ವರ್ಗದ ವಿದ್ಯಾರ್ಥಿಗಳಿಗೆ ಉನ್ನತವಾದ ಶಿಕ್ಷಣವನ್ನು ಪಡೆಯಬೇಕೆಂಬ ನಿಟ್ಟಿನಲ್ಲಿ ಈ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. 

Vidyasiri Scholarship
Vidyasiri Scholarship

ಅರ್ಹತೆ ಮತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ತಮ್ಮ ಉನ್ನತವಾದ ಶಿಕ್ಷಣವನ್ನು ಮುಂದುವರಿಸಲು ಈ ವಿದ್ಯಾರ್ಥಿ ವೇತನವನ್ನು (Vidyasiri Scholarship) ಪಡೆಯಬಹುದಾಗಿದೆ. ಪ್ರಸ್ತುತ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದ್ದು ಅರ್ಜಿ ಸಲ್ಲಿಸಲು ಸಂಪೂರ್ಣವಾದ ಮಾಹಿತಿಯನ್ನು ನೀವು ಈ ಲೇಖನದಲ್ಲಿ ಪಡೆಯಬಹುದಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು? (Vidyasiri Scholarship Online Apply)

ಈ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ರಾಜ್ಯದಲ್ಲಿರುವಂತಹ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮತ್ತು ಪ್ರವರ್ಗ ಒಂದರ ವಿದ್ಯಾರ್ಥಿಗಳು ಹಾಗೂ ಅಲೆಮಾರಿ ವರ್ಗಕ್ಕೆ ಸೇರಿರುವಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. 

ಫೋನ್ ಪೇ ಬಳಕೆದಾರರಿಗೆ ಸಿಹಿ ಸುದ್ದಿ.! ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿ ಸಾಲ ಸಿಗುತ್ತೆ.!

ಮೆಟ್ರಿಕ್ ನಂತರದ ಅಂದರೆ 10ನೇ ತರಗತಿ ಮುಗಿದ ನಂತರ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಸದ್ಯಕ್ಕೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಳ್ಳಲಾಗಿದೆ. ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ವಿದ್ಯಾಭ್ಯಾಸವನ್ನು ವಿದ್ಯಾರ್ಥಿಗಳು ಮಾಡುತ್ತಿರಬೇಕು. 

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು 

  • ಪದವಿ ವಿದ್ಯಾರ್ಥಿಗಳು 
  • ಐಟಿಐ ವಿದ್ಯಾರ್ಥಿಗಳು 
  • ಡಿಪ್ಲೋಮಾ ವಿದ್ಯಾರ್ಥಿಗಳು 
  • ಪಿಯುಸಿ ವಿದ್ಯಾರ್ಥಿಗಳು 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು? (Documents for Vidyasiri Scholarship)

  • ವಿದ್ಯಾರ್ಥಿ ಹಾಗೂ ಪೋಷಕರ ಆಧಾರ್ ಕಾರ್ಡ್ 
  • ಕಾಲೇಜ್ ಪ್ರವೇಶ ಶುಲ್ಕ ತುಂಬಿದ ರಶೀದಿ 
  • ಪ್ರವೇಶ ಪ್ರಮಾಣ ಪತ್ರ 
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ 
  • ಹಾಸ್ಟೆಲ್ ವಿವರಗಳು 
  • ಹಿಂದಿನ ತರಗತಿಯ ಅಂಕಪಟ್ಟಿ 
  • ಇನ್ನಿತರ ದಾಖಲೆಗಳು 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Last Date for Vidyasiri Scholarship)

ಈ ಹಿಂದೆ ರಾಜ್ಯ ಸರ್ಕಾರವು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಡಿಸೆಂಬರ್ 31 ನೇ ತಾರೀಕು 2024ನೇ ದಿನವನ್ನು ಕೊನೆಯ ದಿನಾಂಕ ವನ್ನಾಗಿ ನಿಗದಿ ಮಾಡಿತ್ತು. ಇದೀಗ ಸರ್ಕಾರವು ಅರ್ಜಿ ಸಲ್ಲಿಸದೆ ಇರುವಂತಹ ವಿದ್ಯಾರ್ಥಿಗಳಿಗೆ ಜನವರಿ 15ನೇ ತಾರೀಕು 2025 ರವರೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿರುತ್ತದೆ ಈ ದಿನಾಂಕದ ಒಳಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 

ಅರ್ಜಿ ಸಲ್ಲಿಸುವುದು ಹೇಗೆ? (How to apply for Vidyasiri Scholarship)

ನೀವೇನಾದರೂ ಈ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನಿಮ್ಮ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಕೆಳಗೆ ನೀಡಿರುವಂತಹ ಜಾಲತಾಣವನ್ನು ಬಳಸಿಕೊಂಡು ಕೂಡ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

https://ssp.postmatric.karnataka.gov.in

ಮೇಲೆ ನೀಡಿರುವಂತಹ ಎಸ್‌ಎಸ್‌ಪಿ ಸ್ಕಾಲರ್ಶಿಪ್ ಪೋರ್ಟಲ್ ನಲ್ಲಿ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 15ನೇ ತಾರೀಖಿನ ಒಳಗಾಗಿ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ ಇದೇ ತರಹದ ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment